ಎಲ್ಲಾ ಕ್ಷೇತ್ರಗಳೊಂದಿಗೆ ಸಮನ್ವಯ ಸಾಧಿಸುವುದು ಸಹಕಾರಿ ಸಂಘಗಳ ಹೊಣೆಗಾರಿಕೆ :ಪ್ರಭಾಕರ ಪ್ರಭು

ಸಿದ್ಧಕಟ್ಟೆ: ಸಮಾಜದ ವಿವಿಧ ಕ್ಷೇತ್ರಗಳೊಂದಿಗೆ ಸಮನ್ವಯ ಸಾಧಿಸುವುದು ಸಹಕಾರಿ ಸಂಘಗಳ ಮುಖ್ಯ ಹೊಣೆಗಾರಿಕೆಯಾಗಿದೆ ಎಂದು ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ ಪಟ್ಟರು.


ಅವರು ಇಂದು
ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಸಂಘದ ವ್ಯಾಪ್ತಿಯ ಶಾಲಾ -ಕಾಲೇಜ್ ಗಳಲ್ಲಿ 2020-2021 ನೇ ಸಾಲಿನಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು.
ಸಂಘದ ಉಪಾಧ್ಯಕ್ಷ ಸತೀಶ್ ಪೂಜಾರಿ ಅಲಕ್ಕೆ, ನಿರ್ದೇಶಕರಾದ ಸಂದೇಶ ಶೆಟ್ಟಿ ಪೊಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು,ಮಾಧವ ಶೆಟ್ಟಿಗಾರ್, ದಿನೇಶ್ ಪೂಜಾರಿ ಹುಲಿಮೇರು, ಹರೀಶ್ ಆಚಾರ್ಯ ರಾಯಿ, ಉಮೇಶ್ ಗೌಡ, ದೇವರಾಜ್ ಸಾಲಿಯಾನ್,ವೀರಪ್ಪ ಪರವ, ಜಾರಪ್ಪ ನಾಯ್ಕ,
ಆರಂಬೋಡಿ ಹಾಲು ಉತ್ಪಾದಕ ಸಹಕಾರ ಸಂಘದ ನಿರ್ದೇಶಕ ಕೃಷ್ಣ ಶೆಟ್ಟಿ ಉಮನೊಟ್ಟು ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಸ್ವಾಗತಿಸಿ, ವಂದಿಸಿದರು.