ಪಾಂಗಲ್ಪಾಡಿ: ಪ್ರತಿಷ್ಠಾ ವರ್ಧಂತಿ, ಧಾರ್ಮಿಕ ಸಭೆ ರವಿಶಂಕರ ಶೆಟ್ಟಿ ಬಡಾಜೆ ಅವರಿಗೆ ಶ್ರೀ ವಿಷ್ಣುಪ್ರಸಾದ ಪ್ರಶಸ್ತಿ ಪ್ರದಾನ

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆಯ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಅಮ್ಟಾಡಿ ಮಂಗ್ಲಿಮಾರ್ ಶ್ರೀ ಅಣ್ಣಪ್ಪ ಪಂಜುರ್ಲಿ ಪರಿವಾರ ದೈವಗಳ ದೈವಸ್ಥಾನದ ಆಡಳಿತ ಮೊಕ್ತೇಸರ, ನಾಡಿನ ಹಲವಾರು ಆರಾದನಾಲಯಗಳ ಅಭಿವೃದ್ಧಿಯ ರೂವಾರಿಯಾದ ರವಿಶಂಕರ ಶೆಟ್ಟಿ ಬಡಾಜೆಗುತ್ತು ಅವರಿಗೆ ಶ್ರೀ ವಿಷ್ಣುಪ್ರಸಾದ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಜಿಲ್ಲಾ ಪಂಚಾಯತು ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಪ್ರಗತಿಯಲ್ಲಿ ರವಿಶಂಕರ ಶೆಟ್ಟಿಯವರ ಕೊಡುಗೆ ಅನನ್ಯವಾದುದು ಎಂದರು.


ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಸರ್ವರ ಸಂಘಟಿತ ಪ್ರಯತ್ನವಿದ್ದಾಗ ಶ್ರದ್ಧಾಕೇಂದ್ರಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.
ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಡಾ.ಯೋಗೀಶ್ ಕೈರೋಡಿ ಧಾರ್ಮಿಕ ಉಪನ್ಯಾಸ ನೀಡಿದರು.
ಪರಸ್ಪರ ಪ್ರೀತಿ, ಶಾಂತಿ, ಮಾನವೀಯತೆ ಮತ್ತು ಅಂತರಂಗದ ಶುದ್ಧತೆಯೇ ನಿಜವಾದ ಧಾರ್ಮಿಕತೆ. ಆರಾದನಾಲಯಗಳು ಮನುಷ್ಯ ಸಂಬಂಧಗಳನ್ನು ಬಲಪಡಿಸುವ ಕೇಂದ್ರಗಳಾದಾಗ ಸಮಾಜದಲ್ಲಿ ಶಾಂತಿಯ ನೆಲೆ ಗಟ್ಟಿಗೊಳ್ಳುತ್ತದೆ ಎಂದು ಅವರು ಹೇಳಿದರು.


ಜಿಲ್ಲಾ ಪಂಚಾಯತು ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್, ಚೆನ್ನೈತ್ತೋಡಿ ಗ್ರಾ.ಪಂ.ಅಧ್ಯಕ್ಷೆ ಭಾರತಿರಾಜೇಂದ್ರ, ಇರ್ವತ್ತೂರು ಗ್ರಾ.ಪಂ.ಅಧ್ಯಕ್ಷ ಎಂ.ಪಿ.ಶೇಖರ ಪೂಜಾರಿ, ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಬಂಗೇರ ಕಲ್ಲುಕೊಡಂಗೆ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ಶೆಟ್ಟಿ, ಪ್ರಭಾಕರ ಶೆಟ್ಟಿ ಹಲೆಕ್ಕಿ, ರಮೇಶ ನಾಯ್ಕ, ವೇದಾವತಿ ಭಟ್, ರಜನಿ ಉಪಸ್ಥಿತರಿದ್ದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ರಾಮಕೃಷ್ಣ ಎಸ್.ಸ್ವಾಗತಿಸಿದರು. ಸತೀಶ್ ಕರ್ಕೇರಾ ಕಯ್ಯಾಬೆ ವಂದಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

ವರದಿ: ಗೋಪಾಲ ಅಂಚನ್
9449104318