ಆಲದಪದವು: ಮೆ.8ರಂದು ಬ್ರಹ್ಮಶ್ರೀ ನಾರಾಯಣ ಗುರು ಸಮಯದಾಯ ಭವನ ಲೋಕಾರ್ಪಣೆ, ಗುರು ಪೂಜೋತ್ಸವ

ಬಂಟ್ವಾಳ: ವಾಮದಪದವು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಮಾಜ ಸೇವಾ ಸಂಘದ ವತಿಯಿಂದ ಆಲದಪದವು ಸಂಘದ ವಠಾರದಲ್ಲಿ ನೂತನವಾಗಿ ನಿರ್ಮಾಣಗೊಂಡ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಲೋಕಾರ್ಪಣೆ ಹಾಗೂ ಗುರು ಪೂಜೋತ್ಸವವು ಮೆ.8ರಂದು ನಡೆಯಲಿದೆ.


ಮೆ.7ರಂದು ಅಪರಾಹ್ನ 3.30 ಕ್ಕೆ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಮೆ.8ರಂದು ಬೆಳಿಗ್ಗೆ 9.3ಕ್ಕೆ ಮಹಾಪೂಜೆ ಹಾಗೂ ಲೋಕಾರ್ಪಣೆ ಸಮಾರಂಭ ನಡೆಯಲಿದೆ.
ಕರ್ನಾಟಕ ರಾಜ್ಯ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಮಠದ ಶ್ರೀ ವಿಖ್ಯಾತನಂದ ಸ್ವಾಮೀಜಿ ಲೋಕಾರ್ಪಣೆ ಮಾಡುವರು.


ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವೇದಿಕೆ ಉದ್ಘಾಟಿಸುವರು. ಮಾಜಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸುವರು.ಸ್ಥಳದಾನಿ ಮೋನಪ್ಪ ಪೂಜಾರಿ ಪಾಲೆದಡಿ ನಾಮಫಲಕ ಅನಾವರಣಗೊಳಿಸುವರು.ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉಪನ್ಯಾಸಕ ಗುಣಪ್ರಸಾದ್ ಕಾರಂದೂರು ಉಪನ್ಯಾಸ ನೀಡುವರು.
ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಅಖಿಲ ಭಾರತ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ ಸೂರ್ಯಕಾಂತ ಜಯ ಸಿ.ಸುವರ್ಣ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಜಿಲ್ಲಾ ಪಂಚಾಯತು ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಅಧ್ಯಕ್ಷ ಚಿತ್ತರಂಜನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ತಾಲೂಕು ಪಂಚಾಯತು ಮಾಜಿ ಸದಸ್ಯ ರಮೇಶ ಪೂಜಾರಿ ಕುಡ್ಮೇರು, ಚೆನ್ನೈತ್ತೋಡಿ ಗ್ರಾಮ ಪಂಚಾಯತು ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ, ಇರ್ವತ್ತೂರು ಗ್ರಾಮ ಪಂಚಾಯತು ಅಧ್ಯಕ್ಷ ಎಂ.ಪಿ.ಶೇಖರ ಪೂಜಾರಿ, ಪಿಲಾತಬೆಟ್ಟು ಗ್ರಾಮ ಪಂಚಾಯತು ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಹಿಂದುಳಿದ ವರ್ಗಗಳ ಇಲಾಖಾ ಜಿಲ್ಲಾಧಿಕಾರಿ ಸಚಿನ್ ಕುಮಾರ್ ಮತ್ತಿತರರು ಅತಿಥಿಗಳಾಗಿ ಭಾಗವಹಿಸುವರು.
ಸಂಘದ ಅಧ್ಯಕ್ಷ ಚೇತನ್ ಕುಮಾರ್ ಕುದ್ಕಂದೋಡಿ ಅಧ್ಯಕ್ಷತೆ ವಹಿಸುವರು.
ಮಧ್ಯಾಹ್ನ ಅನ್ನಂತರ್ಪಣೆ, ನಂತರ ದೇಯಿ ಬೈದೆದಿ ಚಲನಚಿತ್ರ ಪ್ರದರ್ಶನ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಚಂದಪ್ಪ ಪೂಜಾರಿ ಆಗಮೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

✍?ಗೋಪಾಲ ಅಂಚನ್
ಯುವಧ್ವನಿ ನ್ಯೂಸ್
9449104318