ಸೆ.11ರಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬಿ.ಸಿ.ರೋಡು ಗಾಣದಪಡ್ಪಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 168ನೇ ಜನ್ಮ ದಿನಾಚರಣೆ ಸಮಾರಂಭ.

ಬಂಟ್ವಾಳ: ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬಿ.ಸಿ.ರೋಡು ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸೆ.11 ರಂದು ಬ್ರಹ್ಮಶ್ರೀ ನಾರಾಯಣ ಗುರುವರ್ಯರ 168ನೇ ಜನ್ಮ ದಿನಾಚರಣೆ ಸಮಾರಂಭವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮಗಳ ವಿವರ:

ಬೆಳಿಗ್ಗೆ 7 ರಿಂದ ಭಜನೆ, 10ರಿಂದ ಗುರುಪೂಜೆ, 10.30ಕ್ಕೆ ಮಹಾಪೂಜೆ, 11ಕ್ಕೆ ಸಭಾ ಕಾರ್ಯಕ್ರಮ, ಸನ್ಮಾನ, ಅಭಿನಂದನೆ ನಡೆಯಲಿದೆ.
ಅಪರಾಹ್ನ 1.30ಕ್ಕೆ ಅನ್ನಸಂತರ್ಪಣೆ, 2 ರಿಂದ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸೇವಾ ಸಮಿತಿ ಮತ್ತು ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಸಹಯೋಗದೊಂದಿಗೆ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿದೆ.

ಸಭಾ ಕಾರ್ಯಕ್ರಮ:

ಬೆಳಿಗ್ಗೆ 11 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡುವರು.ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು‌
ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಸನ್ಮಾನ ಸಮಾರಂಭ:

ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತ ಎಂ.ತುಂಗಪ್ಪ ಬಂಗೇರಾ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತೆ ಶೈಲಜಾ ರಾಜೇಶ್, ಬಿ.ಸಿ.ರೋಡು ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿ ಅಧ್ಯಕ್ಷ ಬಿ.ವಿಶ್ವನಾಥ ಅವರಿಗೆ ಸನ್ಮಾನ ನಡೆಯಲಿದೆ.

ಅಭಿನಂದನೆ:

ಆರ್ಯಭಟ ಪ್ರಶಸ್ತಿ ವಿಜೇತೆ ವಿಧುಷಿ ಡಾ.ದಾಕ್ಷಾಯಿಣಿ ಕಂದೂರು ಮತ್ತು ಎಂ.ಕಾಂ‌.ಪದವಿಯಲ್ಲಿ ರ್ಯಾಂಕ್ ವಿಜೇತೆ ಸ್ವಾತಿ ಕುದ್ಕೋಳಿ ಅವರಿಗೆ ಅಭಿನಂದನೆ ನಡೆಯಲಿದೆ.
ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ.

ವ್ಯಾಪಕ ಸಿದ್ಧತೆ:

ಕೆ.ಸೇಸಪ್ಪ ಕೋಟ್ಯಾನ್ ಅಧ್ಯಕ್ಷ, ರಮೇಶ್ ಎಂ.ತುಂಬೆ ಪ್ರಧಾನ ಕಾರ್ಯದರ್ಶಿ, ಉಮೇಶ ಸುವರ್ಣ ಕೋಶಾಧಿಕಾರಿ, ಎನ್.ಮಹಾಬಲ ಬಂಗೇರಾ ಉಪಾಧ್ಯಕ್ಷ, ಆನಂದ ಸಾಲ್ಯಾನ್ ಶಂಭೂರು ಜತೆ ಕಾರ್ಯದರ್ಶಿ, ಸತೀಶ್ ಬಿ.ಮಿತ್ತಬೈಲು ಲೆಕ್ಕ ಪರಿಶೋಧಕ, ಕಾರ್ಯಕಾರಿ ಸಮಿತಿ ಸದಸ್ಯರು, ಮಾಜಿ ಅಧ್ಯಕ್ಷರುಗಳು, ವಿಶೇಷ ಆಹ್ವಾನಿತರು, ಸರ್ವಸದಸ್ಯರುಗಳನ್ನೊಳಗೊಂಡ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಮಹಿಳಾ ಸಮಿತಿ
ಸಮಾರಂಭದ ಯಶಸ್ವಿಗಾಗಿ ವ್ಯಾಪಕ ಸಿದ್ಧತೆ ನಡೆಸುತ್ತಿದ್ದು ಅಪಾರ ಸಂಖ್ಯೆಯಲ್ಲಿ ಬಿಲ್ಲವ ಸಮುದಾಯ ಭಾಂಧವರು ಭಾಗವಹಿಸುವ ನಿರೀಕ್ಷೆಯಿದೆ.

ವರದಿ:
ಗೋಪಾಲ ಅಂಚನ್, ಆಲದಪದವು
ಸಂಪಾದಕರು
ಯುವಧ್ವನಿ ನ್ಯೂಸ್-ಕರ್ನಾಟಕ