ಸೆ.4ರಂದು ಮೂಡುಪಡುಕೋಡಿ ಗ್ರಾಮದ ಕಲಾಬಾಗಿಲು ಬೆದ್ರ್ ಮಾರ್ ಗದ್ದೆಯಲ್ಲಿ ಕೆಸರ್ದ ಕಂಡೊಡು ಒಂಜಿ ದಿನ ವಿಶೇಷ ಕಾರ್ಯಕ್ರಮ

ಬಂಟ್ವಾಳ: ಸೌಹಾರ್ದತೆಗಾಗಿ ಕ್ರೀಡೆ ದ್ಯೇಯವಾಕ್ಯದೊಂದಿಗೆ ಸೆ.4ರಂದು ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ಗ್ರಾಮದ ಕಲಾಬಾಗಿಲು- ಬೆದ್ರ್ ಮಾರ್ ಗದ್ದೆಯಲ್ಲಿ ಕೆಸರ್ದ ಕಂಡೊಡು ಒಂಜಿ ದಿನ ವಿಶಿಷ್ಠ ಕಾರ್ಯಕ್ರಮ ನಡೆಯಲಿದೆ. ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ಲಯನ್ಸ್ ಕ್ಲಬ್ ವಾಮದಪದವು ಪ್ರಕೃತಿ, ಮೂಡುಪಡುಕೋಡಿ ಹಿಂದೂ ಜಾಗರಣಾ ವೇದಿಕೆ, ಮೂಡುಪಡುಕೋಡಿ ಶಾಲಾ ಹಳೆ ವಿದ್ಯಾರ್ಥಿ ಸಂಘ ಮತ್ತು ಪ್ರಕೃತಿ ಸಂಜೀವಿನಿ ಗ್ರಾಮ ಪಂಚಾಯತು ಮಟ್ಟದ ಒಕ್ಕೂಟ ಇರ್ವತ್ತೂರುಪದವು ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಬೆಳಿಗ್ಗೆ 9ಕ್ಕೆ ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಉದ್ಘಾಟಿಸುವರು. ಕಿಯೋನಿಕ್ಸ್ ನಿಕಟಪೂರ್ವಾಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಅಧ್ಯಕ್ಷತೆ ವಹಿಸುವರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ, ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನಾ ಮಂಡಳಿ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್ ಮೊದಲಾದವರು ಅತಿಥಿಗಳಾಗಿ ಭಾಗವಹಿಸುವರು.
ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತು ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರಾ ಬಹುಮಾನ ವಿತರಿಸುವರು. ವಿವಿಧ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸುವರು.
ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಕ್ರೀಡೆಗಳು ಮತ್ತು ಸಾಧಕರಿಗೆ ಸನ್ಮಾನ ನಡೆಯಲಿದೆ.
…………………

ವರದಿ:
ಗೋಪಾಲ ಅಂಚನ್, ಆಲದಪದವು
ಸಂಪಾದಕರು
ಯುವಧ್ವನಿ ನ್ಯೂಸ್-ಕರ್ನಾಟಕ