ಬಂಟ್ವಾಳ ರಿಕ್ಷಾ ಡ್ರೈವರ್ಸ್ ಎಸೋಸಿಯೇಶನ್ 47ನೇ ವಾರ್ಷಿಕ ಮಹಾಸಭೆ

ಬಂಟ್ವಾಳ: ರಿಕ್ಷಾ ಡ್ರೈವರ್ಸ್ ಎಸೋಸಿಯೇಶನ್ ಬಂಟ್ವಾಳದ 47ನೇ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ರಾಜೇಶ್ ಬೊಳ್ಳುಕಲ್ಲು ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ನಡೆಯಿತು.

ಬಂಟ್ವಾಳ ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಜನಪ್ರತಿನಿಧಿಗಳ ಬೇಡಿಕೆಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಸ್ಪಂದಿಸಬೇಕು. ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಟ್ರಾಫಿಕ್ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವಲ್ಲಿ ಟ್ರಾಫಿಕ್ ಪೋಲೀಸ್ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಬೇಕು ಎಂದರು.
ಸಂಘದ ಅಧ್ಯಕ್ಷ ರಾಜೇಶ್ ಬೊಳ್ಳುಕಲ್ಲು ಮಾತನಾಡಿ ಎಲ್ಲರೂ ಸಂಘಟಿತರಾಗಿ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕು. ಸಂಘದ ವಠಾರದಲ್ಲಿ ಇಂಟರ್ ಲಾಕ್ ಅಳವಡಿಕೆ ಹಾಗೂ ಬಿ.ಸಿ.ರೋಡಿನ ಪದ್ಮಾ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಈ ಹಿಂದೆ ಇದ್ದ ರಿಕ್ಷಾ ನಿಲ್ದಾಣವನ್ನು ಸುವ್ಯವಸ್ಥಿತವಾಗಿ ಸಜ್ಜುಗೊಳಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟರು.

ಸಂಘದ ಗೌರವಾಧ್ಯಕ್ಷ ಟಿ.ನಾರಾಯಣ ಪೂಜಾರಿ ಶುಭ ಹಾರೈಸಿದರು.
ರಿಕ್ಷಾ ಡ್ರೈವರ್ಸ್ ಅಸೋಸಿಯೇಷನ್ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಸ್ವಾಗತಿಸಿದರು, ಖಜಾಂಜಿ ಕೃಷ್ಣಪ್ಪ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ಹುಸೇನ್ ಹಾಗೂ ಕಾರ್ಯದರ್ಶಿ ಪ್ರಕೇಶ್ ಉಪಸಿತರಿದ್ದರು. ಸದಸ್ಯ ಪ್ರಜೆವಿತ್ ವಂದಿಸಿದರು.

ವರದಿ: ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318