ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಪದ್ಮನಾಭ ಸಾಮಂತ್ ವಾಮದಪದವು ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಪದ್ಮನಾಭ ಸಾಮಂತ್ ವಾಮದಪದವು ನೇಮಕಗೊಂಡಿದ್ದಾರೆ.

ಮಾಜಿ ಸಚಿವ ಬಿ. ರಮಾನಾಥ ರೈ ಮತ್ತು ದ.ಕ.ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರ ಶಿಫಾರಸ್ಸಿನ ಮೇರೆಗೆ ದ.ಕ.ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಅವರು ಪದ್ಮನಾಭ ಸಾಮಂತ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪದ್ಮನಾಭ ಸಾಮಂತ್ ಅವರು ಸಾಮಾಜಿಕ ಕಾರ್ಯಕರ್ತರಾಗಿ, ಕಾಂಗ್ರೇಸ್ಸಿನ ಯುವ ನಾಯಕರಾಗಿ, ಕಾಂಗ್ರೇಸ್ ಪಕ್ಷದ ಸಾಮಾಜಿಕ ಜಾಲತಾಣದಲ್ಲಿ ಪ್ರಮುಖರಾಗಿ ತೊಡಗಿಸಿಕೊಂಡಿದ್ದಾರೆ.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318