ನಾಳೆ (ಮಾರ್ಚ್ 25ರಂದು) ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ, ಕಾರಿಂಜ ಕ್ರಾಸ್ ಮತ್ತು ಪಾಣೆಮಂಗಳೂರಿನಲ್ಲಿ ಸಾರ್ವಜನಿಕ ಸಭೆ, ಬಿ.ಕೆ.ಹರಿಪ್ರಸಾದ್ ಸಹಿತ ಪಕ್ಷ ಮುಖಂಡರಿಂದ ಭಾಷಣ


ಬಂಟ್ವಾಳ: ಕರಾವಳಿ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ಮಾರ್ಚ್ 25ರಂದು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಎರಡು ಕಡೆಗಳಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.


ಬೆಳಿಗ್ಗೆ 10.30ಕ್ಕೆ ವಗ್ಗ ಕಾರಿಂಜ ಕ್ರಾಸ್ ಜಂಕ್ಷನ್ ಮತ್ತು ಸಂಜೆ 4ಗಂಟೆಗೆ ಪಾಣೆಮಂಗಳೂರು ಸಾಗರ್ ಅಡಿಟೋರಿಯಂ ವಠಾರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.

ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಎಐಸಿಸಿ ಕಾರ್ಯದರ್ಶಿ ರೋಜಿ ಎಂ.ಖಾನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ವಿಧಾನ ಪರಿಷತ್ತು ಸದಸ್ಯ ಮಂಜುನಾಥ್ ಭಂಡಾರಿ, ದ.ಕ.ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹಿಂ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಮತ್ತಿತರ ಮುಖಂಡರು ಸಭೆಯಲ್ಲಿ ಭಾಗವಹಿಸುವರು.

ಪಕ್ಷದ ವಿವಿಧ ಘಟಕಗಳ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕಾಂಗ್ರೇಸ್ ಅಭಿಮಾನಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಪ್ರಕಟಣೆ ತಿಳಿಸಿದೆ.

ವರದಿ: ಗೋಪಾಲ ಅಂಚನ್ ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ ಮೊ:9449104318