ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈಯವರ ಚುನಾವಣಾ ಕಚೇರಿ ನಾಳೆ ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿಯು ನಾಳೆ ( ಎಪ್ರಿಲ್ 12ರಂದು) ಬೆಳಿಗ್ಗೆ 9ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ಬಿ.ಸಿ. ರೋಡಿನ ಪದ್ಮ ಪೆಟ್ರೋಲ್ ಬಂಕ್ ಮುಂಭಾಗದಲ್ಲಿರುವ ಧನಲಕ್ಷ್ಮಿ ಕಾಂಪ್ಲೆಕ್ಸ್ ನಲ್ಲಿ ನೂತನ ಕಚೇರಿ ಉದ್ಘಾಟನೆಯಾಗಲಿದೆ.


ಕಾಂಗ್ರೆಸ್ ಪಕ್ಷವನ್ನು ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಉದ್ದೇಶದಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲೂ ಭರದ ಚುನಾವಣಾ ಪ್ರಚಾರ ನಡೆಯುತ್ತಿದೆ.
ಈ ಚುನಾವಣೆಯಲ್ಲಿ ಬಂಟ್ವಾಳದಲ್ಲಿ ಬಿ. ರಮಾನಾಥ ರೈಯವರನ್ನು ಭಾರೀ ಅಂತರದಲ್ಲಿ ಗೆಲ್ಲಿಸಲು ಕಾರ್ಯಕರ್ತರು ಅವಿರತ ಶ್ರಮಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯಗಳನ್ನು ನಿರ್ವಹಿಸಲು ಅನುಕೂಲವಾಗುವರೇ ಚುನಾವಣಾ ಕಚೇರಿಯನ್ನು ತೆರೆಯಲಾಗುತ್ತಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮತ್ತು ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಸಪಲ್ಯ ತಿಳಿಸಿದ್ದಾರೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವಿವಿಧ ಸಮುದಾಯಗಳ ಹಿರಿಯ ಮುಖಂಡರು ಕಚೇರಿ ಉದ್ಘಾಟಿಸಲಿದ್ದಾರೆ.
ಅಭ್ಯರ್ಥಿ ಬಿ. ರಮಾನಾಥ ರೈ ಮತ್ತು ಪಕ್ಷದ ವರಿಷ್ಠರು, ಬ್ಲಾಕ್ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ:ಗೋಪಾಲ ಅಂಚನ್ ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318