ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್-ಎ.30ರಂದು ಸಾಮೂಹಿಕ ವಿವಾಹ-ಎ.23ರಂದು ಸಾಮೂಹಿಕ ವಿವಾಹ ನಿಶ್ಚಿತಾರ್ಥ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 39ನೇ ವರ್ಷಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎ.30ರಂದು ನಡೆಯಲಿರುವ 15ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ವಧು-ವರರ ನಿಶ್ಚಿತಾರ್ಥ ಕಾರ್ಯಕ್ರಮವು ಎ.23ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ನಡೆಯಲಿದೆ.

ಈ ಬಾರಿ ಒಟ್ಟು 11 ಜೋಡಿಗಳಿಗೆ ವಿವಾಹ ನಡೆಯಲಿದ್ದು, ತುಳುನಾಡಿನ ಸಂಪ್ರದಾಯ ಪ್ರಕಾರ ನಿಶ್ಚಿತಾರ್ಥ ನಡೆಯಲಿದೆ. ಈ ಸಂದರ್ಭದಲ್ಲಿ ಭಾವೀ ವಧು-ವರರಿಗೆ ಮಂಗಳವಸ್ತ್ರವನ್ನು ವಿತರಿಸಲಾಗುವುದು.
ಬೆಳ್ತಂಗಡಿ ಲಾಯಿಲ ಶ್ರೀ ರಾಘವೇಂದ್ರ ಪ್ರತಿಷ್ಠಾನದ ಕೊಶಾಧಿಕಾರಿ ವಸಂತ ಸುವರ್ಣ ಕಾರ್ಯಕ್ರಮ ಉದ್ಘಾಟಿಸುವರು.
ಶ್ರೀ ಕ್ಷೇ.ಧ.ಗ್ರಾ.ಯೋಜನೆ ಮೇಲ್ವಿಚಾರಕಿ ಅಶ್ವಿನಿ ಅಧ್ಯಕ್ಷತೆ ವಹಿಸುವರು. ಉದ್ಯಮಿ ನಾಗೇಶ್ ಪ್ರಭು ಮಂಗಳ ವಸ್ತ್ರ ವಿತರಿಸುವರು.
ವಿವಿಧ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಹಾಗೂ ಅಧ್ಯಕ್ಷ ಪ್ರಶಾಂತ ಪುಂಜಾಲಕಟ್ಟೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ