ಸಿರಿಗುಂಡದಪಾಡಿ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಕುಮಾರ, ಸಿರಿ, ಅಬ್ಬಗ ದಾರಗ ಆದಿ ಆಲಡೆಯಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಂಭ್ರಮದ ಚಾಲನೆ

ಬಂಟ್ವಾಳ: ತಾಲೂಕಿನ ಮೂಡುಪಡುಕೋಡಿ ಗ್ರಾಮದ ಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಕುಮಾರ, ಸಿರಿ, ಅಬ್ಬಗ ದಾರಗ ಆದಿ ಆಲಡೆಯಲ್ಲಿ ಎಪ್ರಿಲ್ 27ರಿಂದ 29ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಹಾಗೂ ಸಿರಿಜಾತ್ರೆಗೆ ಗುರುವಾರ ಸಂಭ್ರಮದ ಚಾಲನೆ ದೊರೆತಿದೆ.


ಸಂಜೆ ಇರ್ವತ್ತೂರು ಪದವು ಮತ್ತು ಕೊಳಲಬಾಕಿಮಾರಿನಿಂದ ಏಕಕಾಲದಲ್ಲಿ ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಡಾ.ಶಿವಪ್ರಸಾದ್ ಭಟ್ ನೇಸರ, ಸನಂಗುಳಿ ಮತ್ತು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಯು.ಎಸ್.ಚಂದ್ರಶೇಖರ ಭಟ್ ಮೆರವಣಿಗೆಗೆ ಚಾಲನೆ ನೀಡಿದರು‌.
ಚೆಂಡೆ, ಕುಣಿತ ಭಜನೆ, ಬ್ಯಾಂಡು, ವಾಧ್ಯವಾಲಗದೊಂದಿಗೆ ಹೊರೆಕಾಣಿಕೆ ಮೆರವಣಿಗೆಯು ವೈಭವಯುತವಾಗಿ ಸಂಪನ್ನಗೊಂಡಿತು.


ಬ್ರಹ್ಮಶ್ರೀ ವೇದಮೂರ್ತಿ ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯರ ಮಾರ್ಗದರ್ಶನದಲ್ಲಿ ನಡ್ವಂತಾಡಿ ವೇದವ್ಯಾಸ ಪಾಂಗಣ್ಣಾಯರ ನೇತೃತ್ವದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ಆಚಾರ್ಯ ಸನಂಗುಳಿ ಇವರ ಪೌರೋಹಿತ್ಯದಲ್ಲಿ ವಿವಿಧ ವೈಧಿಕ ಕಾರ್ಯಕ್ರಮಗಳು ನಡೆಯಿತು.
ಇದೇ ಸಂದರ್ಭದಲ್ಲಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಪ್ರವೇಶ ಧ್ವಾರವನ್ನು ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರಾ ಉದ್ಘಾಟಿಸಿದರು.
ನೂತನವಾಗಿ ನಿರ್ಮಾಣಗೊಂಡ ಪಾಕಶಾಲೆ, ನೂತನ ಕಚೇರಿ ಮತ್ತು ಮುಖಮಂಟಪವನ್ನು ಉದ್ಘಾಟಿಸಲಾಯಿತು.


ಆಡಳಿತ ಸಮಿತಿ ಗೌರವಾಧ್ಯಕ್ಷ ಮುರಳೀಧರ ಕೆದಿಲಾಯ ಮಂಗಳೂರು,
ಆಡಳಿತ ಸಮಿತಿ ಅಧ್ಯಕ್ಷ ಮೋಹನ್ ಶೆಟ್ಟಿ ನರ್ವಲ್ದಡ್ಡ, ಕಾರ್ಯಾಧ್ಯಕ್ಷ ಜಿ.ಕೆ.ಭಟ್ ವಾಮದಪದವು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ರಾಮಕೃಷ್ಣ ಎಸ್., ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಕೊರಗ ಶೆಟ್ಟಿ ಬಂಗೇರಕೆರೆ, ಅಧ್ಯಕ್ಷ ಬೂಬ ಸಪಲ್ಯ ಮುಂಡಬೈಲು, ಸಂಚಾಲಕ ಗೋಪಾಲ ಅಂಚನ್ ಆಲದಪದವು, ಸಮಿತಿ ಪ್ರಮುಖರಾದ ಪ್ರದೀಪ್ ಕುಮಾರ್ ಶೆಟ್ಟಿ ಬೀಯಂತಬೆಟ್ಟು, ಹರ್ಷ ಶೆಟ್ಟಿ ಭಂಡಾರದಬೆಟ್ಟು, ವೆಂಕಪ್ಪ ಮೂಲ್ಯ ಬಂಗೇರಕೆರೆ, ಲೋಕನಾಥ ಶೆಟ್ಟಿ ನರ್ವಲ್ದಡ್ಡ, ದಯಾನಂದ ಎಸ್.ಎರ್ಮೆನಾಡು, ಮಂಜುನಾಥ ಪೂಜಾರಿ ಮುಂಡಬೈಲು, ಗಣೇಶ ಶೆಟ್ಟಿ ಸೇವಾ, ಪದಾಧಿಕಾರಿಗಳು ಮತ್ತು ಉಪಸಮಿತಿಗಳ ಪ್ರಮುಖರು ಉಪಸ್ಥಿತರಿದ್ದರು.
ಬಳಿಕ ಭಜನಾ ಸಂಕೀರ್ತನೆ, ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕ್ರತಿಕ ಸೌರಭ, ಶ್ರೀ ಲಕ್ಷ್ಮೀ ಮಹಿಳಾ ಮಂಡಳಿ ಪಾಂಗಲ್ಪಾಡಿ-ಇರ್ವತ್ತೂರು ಇವರಿಂದ ತುಳು ನಾಟಕ ಪ್ರದರ್ಶನಗೊಂಡಿತು. ಸತೀಶ್ ಕರ್ಕೆರಾ ಕಯ್ಯಾಬೆ ಮತ್ತು ನಾಗೇಶ್ ಮುಂಡಬೈಲು ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ನಿರ್ವಹಿಸಿದರು.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318