ಚುನಾವಣಾ ರಾಜಕೀಯಕ್ಕೆ ಮಾತ್ರ ನಿವೃತ್ತಿ, ಪಕ್ಷ ಸಂಘಟನೆಯಲ್ಲಿ ಸಕ್ರೀಯ, ಲೋಕಸಭಾ ಚುನಾವಣೆಗೆ ಪಕ್ಷದ ಬಲವರ್ಧನೆ-ಬಿ.ರಮಾನಾಥ ರೈ

ಬಂಟ್ವಾಳ: ನಾನು ಚುನಾವಣಾ ರಾಜಕೀಯಕ್ಕೆ ಮಾತ್ರ ನಿವೃತ್ತಿ ಘೋಷಿಸಿದ್ದೇನೆ, ಆದರೆ ಪಕ್ಷ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತೇನೆ, ಪಕ್ಷದ ನಾಯಕರು ನೀಡುವ ಎಲ್ಲಾ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ,
ಮುಂದಿನ 2024ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟನೆಯನ್ನು ಬಲಪಡಿಸಲು ಪ್ರಯತ್ನಿಸುತ್ತೇನೆ-ಹೀಗೆಂದವರು ಮಾಜಿ ಸಚಿವ ಬಿ.ರಮಾನಾಥ ರೈ
.

ಬಿ.ಸಿ.ರೋಡಿನ ಪಕ್ಷ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದ್ದಿಷ್ಟು:

ಅಕ್ರಮ ಮರಳುದಂಧೆಕೋರರ ಹಣ ಈ ಚುನಾವಣೆಯಲ್ಲಿ ನನ್ನ ಸೋಲಿಗೆ ಹೆಚ್ಚಿನ ಪ್ರಭಾವ ಬೀರಿದೆ, ನಾನು ಗೆದ್ದಲ್ಲಿ ಬಿಜೆಪಿವರಿಗೆ ಅಕ್ರಮ ಮರಳುಗಾರಿಕೆ ಕಡಿವಾಣ ಬೀಳುತ್ತದೆ ಎನ್ನುವ ಭಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಮರಳು ಮಾಫಿಯದವರು ಹಣ ಹಂಚಿದ್ದಾರೆ, ಹಣ ಬಲದ ಎದುರು ನನಗೆ ಸೋಲಾಗಿದೆ.
ಸುದೀರ್ಘ ಅವಧಿಯ ರಾಜಕೀಯ ಜೀವನದಲ್ಲಿ ಯಾವುದೇ ತಪ್ಪು ಮಾಡದೆ ಕಳಂಕ ರಹಿತವಾಗಿ ಬದುಕಿದ್ದೇನೆ.
ಬಂಟ್ವಾಳ ಕ್ಷೇತ್ರದಲ್ಲಿ ಈ ಬಾರಿ ಕಡಿಮೆ ಅಂತರದಲ್ಲಿ ಸೋಲಾಗಿದೆ, ಸೋಲನ್ನು ಕಾರ್ಯಕರ್ತರು ಸವಾಲಾಗಿ ಸ್ವೀಕರಿಸಿ ಮತ್ತೆ ಕಾಂಗ್ರೆಸನ್ನು ಗೆಲ್ಲಿಸಬೇಕು. ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಪ್ರಣಾಳಿಕೆಯಲ್ಲಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಿದ್ದಾರೆ. ಆದ್ದರಿಂದ ಕಾಂಗ್ರೆಸ್ ನೀಡಿರುವ ಎಲ್ಲಾ ಭರವಸೆಗಳು ಈಡೇರಲಿದೆ. ಬಂಟ್ವಾಳ ಕ್ಷೇತ್ರದ ಅಭಿವೃದ್ದಿಯ ಬಗ್ಗೆ ಅನೇಕ ಕನಸುಗಳಿದ್ದು, ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಪೂರ್ತಿ ಮಾಡಲು ಪ್ರಯತ್ನ ಮಾಡುತ್ತೇನೆ. ರಾಜಕೀಯವೇ ನನ್ನ ಜೀವನ, ವ್ಯಾಪಾರ ಇಲ್ಲದೆ ಸಾಮಾಜಿಕ ಜೀವನ ಮಾಡಿಕೊಂಡು ಬಂದಿದ್ದೇನೆ. ಇಷ್ಟು ವರ್ಷದ ರಾಜಕಾರಣದಲ್ಲಿ ಶುಧ್ದ ಹಸ್ತದ ರಾಜಕೀಯ ಮಾಡಿದ್ದೇನೆ, ಕ್ಷೇತ್ರದ ಜನತೆಗೆ ಗೌರವ ತರುವ ಕೆಲಸ ಮಾಡಿದ್ದೇನೆ.

ಸುದ್ದಿಗೋಷ್ಟಿಯಲ್ಲಿ ಇದ್ದವರು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್. ಮಹಮ್ಮದ್, ಪದ್ಮಶೇಖರ್ ಜೈನ್, ಪ್ರಮುಖರಾದ ಪಿಯೂಸ್ ಎಲ್. ರೋಡ್ರಿಗಸ್, ಅಬ್ಬಾಸ್ ಆಲಿ, ಸುದರ್ಶನ ಜೈನ್, ಮಾಯಿಲಪ್ಪ ಸಾಲ್ಯಾನ್, ಸುರೇಶ್ ಜೋರಾ, ಇಬ್ರಾಹಿಂ ನವಾಜ್ ಬಡಕಬೈಲು, ಸದಾಶಿವ ಬಂಗೇರ, ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಬಿ.ಮೋಹನ್, ಜಗದೀಶ್ ಕೊಯಿಲ ಮತ್ತಿತರರು.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318