ಮಾರ್ಚ್ 8ರಂದು ಮಾಣಿಯಲ್ಲಿ “ಮಾತೆಯ ಮಡಿಲು”ವಿಚಾರ ಸಂಕಿರಣ( ಗೋಪಾಲ ಅಂಚನ್, ಸಂಪಾದಕರು, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಯುವವಾಹಿನಿ (ರಿ.)ಮಾಣಿ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇವುಗಳ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಮಾತೆಯ ಮಡಿಲು” ವಿಚಾರ ವಿನಿಮಯ ಕಾರ್ಯಕ್ರಮ ದಿನಾಂಕ 8-3-2024 ನೇ ಶುಕ್ರವಾರ ಬೆಳಿಗ್ಗೆ ಗಂಟೆ 9-30 ಕ್ಕೆ ಸರಿಯಾಗಿ ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮಾಣಿಯಲ್ಲಿ ನಡೆಯಲಿದೆ.


ಯುವವಾಹಿನಿ (ರಿ.)ಮಾಣಿ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಕೊಂಕಣಪದವು ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದ ಉದ್ಘಾಟನೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ( ರಿ.)ಮಾಣಿಯ ಮಹಿಳಾ ಘಟಕದ ಅಧ್ಯಕ್ಷರಾದ ಹರಿಣಾಕ್ಷಿ ಮುರುವ ಉದ್ಘಾಟಿಸುವರು.
ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರಿನ ಮಹಿಳಾ ಸಂಘಟನಾ ನಿರ್ದೇಶಕಿ ನಯನ ಸುರೇಶ್, ಕೊಡಪದವು ಶಾಲಾ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕಿ ಆರತಿ ದಾಸಪ್ಪ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.)ಮಾಣಿಯ ಅಧ್ಯಕ್ಷರಾದ ಸುರೇಶ್ ಸೂರ್ಯ, ಯುವವಾಹಿನಿ( ರಿ.) ಮಾಣಿ ಘಟಕದ ಮಹಿಳಾ ನಿರ್ದೇಶಕರಾದ ಶಕೀಲಾ ಕೃಷ್ಣ ಮಿತ್ತಕೋಡಿ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿರುವರು.
“ಸ್ವಸ್ಥ ಮಹಿಳೆ- ಸ್ವಸ್ಥ ಮನೆ” ಎಂಬ ವಿಚಾರವಾಗಿ ವಿಟ್ಲ ಸುರಕ್ಷಾ ಹೆಲ್ತ್ ಸೆಂಟರ್ ನ ಡಾಕ್ಟರ್ ಗಾಯತ್ರಿ ಜಿ ಪ್ರಕಾಶ್, “ಕಾನೂನಿನ ಸಂರಕ್ಷಣೆಯಲ್ಲಿ ಮಹಿಳೆ “ಎಂಬ ವಿಷಯದ ಬಗ್ಗೆ ನ್ಯಾಯವಾದಿ, ನೋಟರಿ ಶೋಭಾ ಲತಾ ಸುವರ್ಣ ವಿಚಾರ ಮಂಡಿಸಲಿರುವರು ಎಂದು ಕಾರ್ಯಕ್ರಮದ ಸಂಚಾಲಕಿ ಡಾ. ತ್ರಿವೇಣಿ ರಮೇಶ್ ಮುಜಲ ತಿಳಿಸಿದ್ದಾರೆ.