ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ಹೊಸಪಟ್ಣ – ಬಜಿರೆ ಆಶ್ರಯದಲ್ಲಿ ಮಾರ್ಚ್ 14ರಂದು 45 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ(ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬೆಳ್ತಂಗಡಿ: ತಾಲೂಕಿನ ಬಜಿರೆ ಗ್ರಾಮದ ಹೊಸಪಟ್ಣ ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಫ್ರೆಂಡ್ಸ್ ಕ್ಲಬ್, ಶ್ರೀ ಸತ್ಯನಾರಾಯಣ ಭಜನಾ ಮಂಡಳಿ, ಶ್ರೀ‌ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಪ್ರಗತಿ ಬಂಧು ಸ್ವಸಹಾಯ ಒಕ್ಕೂಟ ಬಜಿರೆ ಬಿ ಇವುಗಳ ಸಂಯುಕ್ತ ಆಶ್ರಯದಲ್ಲಿ 45ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಮಾರ್ಚ್ 14 ರಂದು ಬಜಿರೆ ಹೊಸಪಟ್ಣದಲ್ಲಿ ನಡೆಯಲಿದೆ.

ಸಂಜೆ 4.30ಕ್ಕೆ ಪೂಜಾರಂಭ, ರಾತ್ರಿ ಗಂಟೆ 7ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಗಂಟೆ 8ಕ್ಕೆ ಸಭಾಕಾರ್ಯಕ್ರಮ, ರಾತ್ರಿ 8.30 ಕ್ಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸಪಟ್ಣ ಮಕ್ಕಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ, ರಾತ್ರಿ 9.
30ರಿಂದ ಪಿಂಗಾರ ಕಲಾವಿದೆರ್ ಬೆದ್ರ ಅಭಿನಯಿಸುವ ಕದಂಬ ತುಳು ನಾಟಕ ನಡೆಯಲಿದೆ.
ಸಭಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಪಂಚಾಯತು ಅಧ್ಯಕ್ಷ ನೇಮಯ್ಯ ಕುಲಾಲ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ
ಧರಣೇಂದ್ರ ಕುಮಾರ್, ಶೇಖರ್ ಕುಕ್ಕೇಡಿ ಮೊದಲಾದವರು ಭಾಗವಹಿಸುವರು. ಇದೇ ಸಂದರ್ಭ ಸಾಧಕರಿಗೆ ಸನ್ಮಾನ ನಡೆಯಲಿದೆ.