ಗ್ಯಾರಂಟಿ ಯೋಜನೆ ಅನುಷ್ಠಾನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಗೆ ನೇಮಕಕ್ಕೆ ಅಬ್ಬಾಸ್ ಅಲಿ ಅಸಮಾಧಾನ

ಬಂಟ್ವಾಳ:
ರಾಜ್ಯ ಸರಕಾರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನಗೊಳಿಸುವ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಗೆ ಸದಸ್ಯರನ್ನಾಗಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಅಬ್ಬಾಸ್ ಅಲಿಯವರನ್ನು ಸರಕಾರ ನೇಮಕಗೊಳಿಸಿ ಆದೇಶ ಹೊರಡಿಸಿದ್ದು ಇದರ ಬಗ್ಗೆ ಅಬ್ಬಾಸ್ ಅಲಿಯವರು ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

ಇಂಥಾ ಅಧಿಕಾರಕ್ಕೆ ತಾನು ಯಾವತ್ತೂ ಬಯಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪ್ರಸಕ್ತ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷನಾಗಿರುವ ತಮ್ಮನ್ನು ಪಕ್ಷ ನಡೆಸಿದ ರೀತಿಯ ಬಗ್ಗೆ ತಮ್ಮ ಬೆಂಬಲಿಗರಲ್ಲಿ ಬೇಸರ ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ.
ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸ್ಥಾನಕ್ಕೆ ತನ್ನನ್ನು ಪರಿಗಣಿಸುವಂತೆ ಈಗಾಗಲೇ ಪಕ್ಷದ ವರಿಷ್ಟರಿಗೆ ಮನವಿ ಸಲ್ಲಿಸಿದ್ದು ಗ್ಯಾರೆಂಟಿ ಅನುಷ್ಠಾನ ಯೋಜನೆಯಂತಹ ಸ್ಥಾನ ಮಾನದ ಬಗ್ಗೆ ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ನಿರ್ಧರಿಸಿದ್ದಾರೆ ಎಂದು ಆಪ್ತ ವಲಯದ ಪ್ರಕಟಣೆ ತಿಳಿಸಿದೆ.