ವಾಮದಪದವು ಡಿಗ್ರಿ ಕಾಲೇಜಿನಲ್ಲಿ “ಮಾದಕ ವ್ಯಸನಗಳ ದುಷ್ಪರಿಣಾಮಗಳು” ಉಪನ್ಯಾಸ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ವಾಮದಪದವು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಭರವಸಾ ಕೋಶ ಮತ್ತು ಸಮಾಜಕಾರ್ಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ “ಮಾದಕ ವ್ಯಸನದ ದುಷ್ಪರಿಣಾಮಗಳು” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.


ಆಳ್ವಾಸ್ ಪುನರ್ಜನ್ಮ ಕೇಂದ್ರದ ಆಪ್ತ ಸಮಾಲೋಚಕ ಲೋಹಿತ್ ಕೆ. ಬಂಟ್ವಾಳ ಅವರು ಮಾದಕ ವ್ಯಸನದ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಡಾ. ರಾಧಾಕೃಷ್ಣ ಹೆಚ್. ಬಿ. ಮಾತನಾಡಿ ಇಂತಹ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡಾಗ ನಮ್ಮ ವ್ಯಕ್ತಿತ್ವದಲ್ಲಿ ಬದಲಾವಣೆ ಸಾಧ್ಯ ಎಂದರು.
ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಸ್ವಾತಿ ಪ್ರಾರ್ಥಿಸಿದರು. ಪುನೀತ್ ಸ್ವಾಗತಿಸಿದರು. ದೀಪ್ತಿ ವಂದಿಸಿದರು. ಕಾರ್ಯಕ್ರಮದಲ್ಲಿ ಸುಮಾರು 70ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವೇದಿಕೆಯಲ್ಲಿ ವಿಭಾಗದ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.