ಪೊಳಲಿ ಸರಕಾರಿ ಪ್ರೌಢಶಾಲೆಗೆ ಲ್ಯಾಪ್ಟಾಪ್ ಮತ್ತು ಪ್ರಾಜೆಕ್ಟರ್ ಕೊಡುಗೆ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದೊಂದಿಗೆ ಶಿಕ್ಷಣ ನೀಡುವ ಆಶಯದೊಂದಿಗೆ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಗೆ ಲ್ಯಾಪ್ಟಾಪ್ ಮತ್ತು ಪ್ರಾಜೆಕ್ಟರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು.


ಸಂಸ್ಥೆಯ ಜನರಲ್ ಮ್ಯಾನೇಜರ್ ರೋನಾಲ್ಡ್ ಡಿಸೋಜಾ ಉಪಸ್ಥಿತರಿದ್ದರು. ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ವೆಂಕಟೇಶ್ ಶಾಲೆಯ ಪರವಾಗಿ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಮುಖ್ಯ ಶಿಕ್ಷಕರಾದ ಸುಬ್ರಾಯ ಎನ್. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪೂರ್ಣಿಮಾ ಸ್ವಾಗತಿಸಿ ಶಾಂತ ವಂದಿಸಿದರು. ರಂಜಿತಾ ಕಾರ್ಯಕ್ರಮ ನಿರೂಪಣೆ ಮಾಡಿದರು.