ಏಪ್ರಿಲ್ 7ರಂದು ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ.
ಪೊಳಲಿ ಶ್ರೀ ರಾಜರಾಜೇಶ್ವರಿ‌ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕ ರಾಮ್ ಭಟ್ ದೀಪ ಪ್ರಜ್ವಲಿಸುವರು.


ಉದ್ಯಮಿ ರಘುನಾಥ ಸೋಮಯಾಜಿ ಉದ್ಘಾಟಿಸುವರು.
ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ದ.ಕ.ಜಿಲ್ಲಾ ಧಾರ್ಮಿಕ ಪರಿಷತ್ತು ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜೇಶ್ ಸ್ಕೈಲಾರ್ಕ್, ತಾರಾನಾಥ ಶೆಟ್ಟಿ ಬೋಳಾರ, ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ ಅತಿಥಿಗಳಾಗಿ ಭಾಗವಹಿಸುವರು ಎಂದು ತಾಲೂಕು ಘಟಕದ ಅಧ್ಯಕ್ಷೆ ಪ್ರಮೀಳ ಮಾಣೂರು( ಸಾಯಿಪ್ರಿಯ) ಮತ್ತು ಪ್ರಧಾನ ಕಾರ್ಯದರ್ಶಿ ರಮೇಶ್ ಮೆಲ್ಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.