ವಾಮದಪದವು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇಖಡಾ 99 ಫಲಿತಾಂಶ, ಗ್ರಾಮೀಣ ಕಾಲೇಜಿನಲ್ಲಿ ಉತ್ತಮ ಸಾಧನೆ, ವಾಣಿಜ್ಯ ವಿಭಾಗದಲ್ಲಿ ಶಮ ಅವರಿಗೆ 590 ಅಂಕ. (ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಗ್ರಾಮೀಣ ಪ್ರದೇಶದ ವಾಮದಪದವು ಪದವಿಪೂರ್ವ ಕಾಲೇಜು ವಾರ್ಷಿಕ ಪರೀಕ್ಷೆಯಲ್ಲಿ ಶೇಖಡಾ 99 ಫಲಿತಾಂಶ ದಾಖಲಿಸುವ ಮೂಲಕ ಉತ್ತಮ ಸಾಧನೆಗೈದಿದೆ.
ಪರೀಕ್ಷೆಗೆ ಹಾಜರಾದ 192 ವಿದ್ಯಾರ್ಥಿಗಳ ಪೈಕಿ 190 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ವಾಣಿಜ್ಯ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಒಟ್ಟು 32 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಹಾಗೂ 129 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗದ ಶಮ 590, ಸಹನಾ 587, ರಕ್ಷಾ ಕೆ. ಪೂಜಾರಿ 583 ಅತ್ಯಧಿಕ ಅಂಕ ಪಡೆಯುವ ಮೂಲಕ ವಿಶೇಷ ಸಾಧನೆಗೈದಿದ್ದಾರೆ.

ಕಲಾ ವಿಭಾಗದಲ್ಲಿ 38ರಲ್ಲಿ 38 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ 100℅ ಫಲಿತಾಂಶ ಸಾಧಿಸಿದೆ.
2 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಮತ್ತು 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಲಾವಿಭಾಗದಲ್ಲಿ ದೀಪ್ತಿ 579, ಹರೀಶ್ 513, ಕಾರ್ತಿಕ್ 497 ಅಂಕಗಳನ್ನು ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 89 ವಿದ್ಯಾರ್ಥಿಗಳಲ್ಲಿ 87 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಖಡಾ 98 ಫಲಿತಾಂಶ ದಾಖಲಾಗಿದೆ.
18 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಮತ್ತು 55 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಶಮಾ 590, ಸಹನಾ 587, ರಕ್ಷಾ ಕೆ.ಪೂಜಾರಿ 583 ಅಂಕ ಪಡೆದಿದ್ದಾರೆ.

ಎಕಾನೊಮಿಕ್ಸ್ ಸಹನಾ ಕುಮಾರಿ ಶೇಖಡಾ 100,
ಎಕೊಟೆಂಟ್ಸಿ ಸಹನಾ ಕುಮಾರಿ, ಶಮ,
ಸುಮಂತ್ ಎಂ.ಪೂಜಾರಿ ಶೇಖಡಾ 100 ಫಲಿತಾಂಶ ದಾಖಲಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 65ರಲ್ಲಿ 65 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಖಡಾ 100 ಫಲಿತಾಂಶ ಬಂದಿದೆ.
12 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಮತ್ತು 46 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಪೂಜಾ 577, ಮನೋಜ್ 556,
ರಶ್ಮಿತಾ 553 ಅಂಕ ಪಡೆದಿದ್ದಾರೆ.
ಬಯೊಲಾಜಿ ಪೂಜಾ 100/100 ಅಂಕ ಪಡೆದಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಕಾಲೇಜು ಅಭಿವೃದ್ಧಿ ಸಮಿತಿ ಅಭಿನಂದನೆ ಸಲ್ಲಿಸಿದೆ.