ಕರ್ನಾಟಕ ಜಾನಪದ ಪರಿಷತ್ತು ಬಂಟ್ವಾಳ ಘಟಕ ಉದ್ಘಾಟನೆ, ನೂತನ ಪದಾಧಿಕಾರಿಗಳ ಪದಗ್ರಹಣ, ಸಾಧಕರಿಗೆ ಸನ್ಮಾನ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ದಕ್ಷಿಣಕನ್ನಡ ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ, ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ನಡೆಯಿತು.

ಪೊಳಲಿ ಶ್ರೀ ರಾಜರಾಜೇಶ್ವರಿ‌ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕ ರಾಮ್ ಭಟ್ ದೀಪ ಪ್ರಜ್ವಲಿಸಿ ಮಾತನಾಡಿ ಜಾನಪದ ಪರಂಪರೆ ಶ್ರೇಷ್ಠವಾದುದು. ಅದನ್ನು ಉಳಿಸಿ ಬೆಳೆಸಿದರೆ ಈ ಮಣ್ಣಿನ ನೈಜ ಸತ್ವ ಉಳಿಯುತ್ತದೆ ಎಂದರು.
ಉದ್ಯಮಿ ರಘುನಾಥ ಸೋಮಯಾಜಿ ಉದ್ಘಾಟಿಸಿ ಮಾತನಾಡಿ ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯ ಶ್ರೇಷ್ಠವಾದುದು ಎಂದರು.


ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ದ.ಕ.ಜಿಲ್ಲಾ ಧಾರ್ಮಿಕ ಪರಿಷತ್ತು ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್, ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಂ ಪೂಜಾರಿ, ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಮಾಲತಿ ಶೆಟ್ಟಿ ಮಾಣೂರು ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
ತಾಲೂಕು ಘಟಕದ ಅಧ್ಯಕ್ಷೆ ಪ್ರಮೀಳ ಮಾಣೂರು( ಸಾಯಿಪ್ರಿಯ) ಅಧ್ಯಕ್ಷತೆ ವಹಿಸಿ ಮಾತನಾಡಿ ಪರಿಷತ್ತಿನ ಕಾರ್ಯಚಟುವಟಿಕೆಗಳಿಗೆ ಸರ್ವರ ಸಹಕಾರ ಕೋರಿದರು.
ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಲಾಯಿತು. ದೈವರಾದನಾ ಕಲಾವಿದ ಶೇಖರ ಪಂಬದ ಅವರನ್ನು ಸನ್ಮಾನಿಸಲಾಯಿತು.
ಗೌರವ ಸಲಹೆಗಾರ ಸದಾಶಿವ ಡಿ.ತುಂಬೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಮೇಶ್ ಮೆಲ್ಕಾರ್ ವಂದಿಸಿದರು. ಸಾಂಸ್ಕ್ರತಿಕ ಕಾರ್ಯದರ್ಶಿ ಎಚ್ಕೆ. ನಯನಾಡು ಕಾರ್ಯಕ್ರಮ ನಿರೂಪಿಸಿದರು.
ಕೋಶಾಧಿಕಾರಿ ಬಬಿತ ಎಸ್.ಎಮ್., ಜತೆ ಕಾರ್ಯದರ್ಶಿ ಲಕ್ಷ್ಮೀ ಯಶವಂತ ಶೆಟ್ಟಿ ತುಂಬೆ, ಉಪಾಧ್ಯಕ್ಷೆ ಪ್ರತಿಭಾ ಪಿ.ಶೆಟ್ಟಿ, ಗೌರವ ಸಲಹೆಗಾರರಾದ ಅನಿಲ್ ಪಂಡಿತ್, ಗೋಪಾಲ ಅಂಚನ್, ಸಂಚಾಲಕರಾದ ಮನೋಜ್ ಕನಪಾಡಿ, ಪ್ರಶಾಂತ್ ಕನಪಾಡಿ, ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಕಡೆಗೋಳಿ, ಸಾಂಸ್ಕ್ರತಿಕ ಕಾರ್ಯದರ್ಶಿ ದಿನೇಶ್ ಕೊಟ್ಟಿಂಜ ಮೊದಲಾದವರಿದ್ದರು.