ಡಿ.8.ರಂದು ನಮ ಬಿರುವೆರ್ ಐಕ್ಯತಾ ಸಮಾವೇಷ ಹತ್ತು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ

ಡಿ.8.ರಂದು ನಮ ಬಿರುವೆರ್ ಐಕ್ಯತಾ ಸಮಾವೇಷ
ಹತ್ತು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ

ಬಂಟ್ವಾಳ: ಬಿಲ್ಲವ ಕಣ್ಮನಿಗಳ ಅಭಿನಂದನಾ ಸಮಿತಿ, ತಾಲೂಕಿನ ಬಿಲ್ಲವ ಸಂಘಟನೆಗಳು, ಯುವವಾಹಿನಿ ಬಂಟ್ವಾಳ ಮತ್ತು ಮಾಣಿ ಘಟಕಗಳ ಸಹಭಾಗಿತ್ವದಲ್ಲಿ ಡಿ.8 ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯುವ ನಮ ಬಿರುವೆರ್ ಐಕ್ಯತಾ ಸಮಾವೇಷಕ್ಕೆ ವ್ಯಾಪಕ ಸಿದ್ಧತೆ ನಡೆಯುತ್ತಿದೆ ಎಂದು ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆಗುತ್ತು ತಿಳಿಸಿದರು.
ಮೆಲ್ಕಾರ್ ಬಿರ್ವ ಸೆಂಟರಿನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ವಿವರಣೆ ನೀಡಿದರು. ಸಮುದಾಯದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬಹುದಾದ ಅಪೂರ್ವ ಸಮಾರಂಭ ಇದಾಗಿದ್ದು ಹತ್ತರಿಂದ ಹದಿನೈದು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಈಗಾಗಲೇ ಸಮಿತಿಯ ಪ್ರಮುಖರನ್ನೊಳಗೊಂಡ ನಾಲ್ಕೈದು ತಂಡಗಳು ತಾಲೂಕಿನಾದ್ಯಾಂತ ಇರುವ ಬಿಲ್ಲವ ಸಂಘಟನೆಗಳು, ಬಿಲ್ಲವ ಪ್ರಮುಖರನ್ನು ಭೇಟಿ ಮಾಡಿ ಸಮಾಲೋಚನಾ ಸಭೆ ನಡೆಸಿದ್ದು ತಾಲೂಕಿನ ಪ್ರತೀ ಗ್ರಾಮಗಳಲ್ಲಿ, ಹಳ್ಳಿಗಳಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಪ್ರತೀ ಗ್ರಾಮಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಬಿಲ್ಲವ ಭಾಂದವರು ಸಮಾವೇಷದಲ್ಲಿ ಭಾಗವಹಿಸುವ ಲಕ್ಷಣಗಳು ವ್ಯಕ್ತವಾಗಿದೆ.
ಸ್ಪರ್ಶಾ ಕಲಾಮಂದಿರದ ವಿಶಾಲ ಸಭಾಂಗಣ ಸಹಿತ ಹೊರಾಂಗಣದಲ್ಲಿ ವಿಶಾಲ ಸಭಾಂಗಣ, ಭವ್ಯವಾದ ವೇದಿಕೆ ಸಹಿತ ಇತರ ವ್ಯವಸ್ಥೆಗಳ ಸಿದ್ಧತಾ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಅವರು ಹೇಳಿದರು.
ಬಿ.ಸಿ.ರೋಡು ನಗರ ಸಹಿತ ಇತರ ನಗರ ಭಾಗಗಳು ಸೇರಿದಂತೆ ತಾಲೂಕಿನ ಪ್ರತೀ ಗ್ರಾಮಗಳಲ್ಲಿ ಐಕ್ಯತಾ ಸಮಾವೇಷದ ಹಿನ್ನೆಲೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದೆ.
ಪ್ರಸ್ತುತ ನಾನಾ ಕಾರಣಗಳಿಂದಾಗಿ ಅಲ್ಲಲ್ಲಿ ವಿಭಜನೆಗೊಂಡಿರುವ ಬಿಲ್ಲವರು ಒಂದೇ ವೇದಿಕೆಯಡಿ ಸಂಪನ್ನಗೊಂಡು ಬಿಲ್ಲವ ಸಮಾಜದ ಗತವೈಭವ ಮತ್ತೊಮ್ಮೆ ಜಗತ್ತಿಗೆ ಸಾರಲು ಈ ಐಕ್ಯತಾ ಸಮಾವೇಷ ಮುನ್ನುಡಿಯಾಗಲಿದೆ ಎಂದರು.
ಕಾರ್ಯಕ್ರಮ ವಿವರಣೆ:
ಡಿ.8ರಂದು ಬೆಳಿಗ್ಗೆ 8.30ಕ್ಕೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆಯಾಗಿ ಅಲ್ಲಿಂದ ಸ್ವಾಮೀಜಿ ಸಹಿತ ಗಣ್ಯರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸ್ಪರ್ಶಾ ಕಲಾಮಂದಿರಕ್ಕೆ ಕರೆತರಲಾಗುವುದು.
ಬೆಳಿಗ್ಗೆ 9.30ಕ್ಕೆ ಸಮಾವೇಷ ಆರಂಭಗೊಳ್ಳಲಿದ್ದು
ಶ್ರೀ ಕ್ಷೇತ್ರ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಬಲ್ಯೊಟ್ಟು ಕ್ಷೇತ್ರದ ಶ್ರೀ ವಿಖ್ಯಾತನಂದ ಸ್ವಾಮೀಜಿ, ಕಾಣಿಯೂರು ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ, ಕುಕ್ಕಾಜೆ ಕ್ಷೇತ್ರದ ಶ್ರೀ ಕೃಷ್ಣ ಗುರೂಜಿ ಆಶೀವ್ರಚನ ನೀಡುವರು. ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಗೌರವಾಧ್ಯಕ್ಷ ಜಯ ಸಿ.ಸುವರ್ಣ, ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಅವರಿಗೆ ಅಭಿನಂದನೆ ನಡೆಯಲಿದೆ.
ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು.
ಶಾಸಕರಾದ ಉಮಾನಾಥ ಕೋಟ್ಯಾನ್, ಹರೀಶ್ ಕುಮಾರ್, ನಿವೃತ್ತ ಡಿವೈಎಸ್ ಪಿ. ಬಿ.ಕೆ.ಶಿವರಾಮ್, ಆಕಾಶವಾಣಿ ಕಾರ್ಯನಿರ್ವಹಣಾಧಿಕಾರಿ ಡಾ.ಸದಾನಂದ ಪೆರ್ಲ, ಉಡುಪಿ ಎಎಸ್ಪಿ ಕುಮಾರಚಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಡಾ.ವಿಜಯ ಪ್ರಕಾಶ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ಆಪ್ತ ಸಹಾಯಕ ಜಗನ್ನಾಥ ಬಂಗೇರ, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಎಸ್ ಎನ್ ಡಿ ಪಿ ಮಹಿಳಾ ಸಮಿತಿ ರಾಜ್ಯಾಧ್ಯಕ್ಷೆ ಗೀತಾಂಜಲಿ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಉದ್ಯಮಿ ಜಯದೀಪ್ ಡಿ.ಸುವರ್ಣ, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಜಯಂತ ನಡುಬೈಲು, ಯುವವಾಹಿನಿ ಬಂಟ್ವಾಳ ಘಟಕ ಅಧ್ಯಕ್ಷ ಬಿ.ಇಂದಿರೇಶ್, ಮಾಣಿ ಘಟಕದ ಅಧ್ಯಕ್ಷ ರಮೇಶ್ ಮುಜಲ ಅತಿಥಿಗಳಾಗಿ ಭಾಗವಹಿಸುವರು.
2018-19ನೇ ಸಾಲಿನಲ್ಲಿ ಬಂಟ್ವಾಳ ತಾಲೂಕಿನಲ್ಲಿ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿಯಲ್ಲಿ 90 ಕ್ಕಿಂತ ಹೆಚ್ಚು ಅಂಕ ಪಡೆದ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು. ಎ.ರುಕ್ಮಯ ಪೂಜಾರಿ, ಕೆ.ಸಂಜೀವ ಪೂಜಾರಿ ಬೊಳ್ಳಾಯಿ, ಕೆ.ಮಾಯಿಲಪ್ಪ ಸಾಲ್ಯಾನ್ ಗೌರವಾಧ್ಯಕ್ಷರಾಗಿರುವ, ಯಶವಂತ ಪೂಜಾರಿ ದೇರಾಜೆಗುತ್ತು ಅಧ್ಯಕ್ಷರಾಗಿರುವ ಜಗದೀಶ ಕೊಯಿಲ ಪ್ರಧಾನ ಕಾರ್ಯದರ್ಶಿ, ಪ್ರೇಮನಾಥ್ ಕೆ.ಕೋಶಾಧಿಕಾರಿಯಾಗಿರುವ ಬಿಲ್ಲವ ಕಣ್ಮನಿಗಳ ಅಭಿನಂದನಾ ಸಮಿತಿಯ ಪದಾಧಿಕಾರಿಗಳು, ಯುವವಾಹಿನಿಯ ಪ್ರಮುಖರ ಸಹಿತ ಅಪಾರ ಸಂಖ್ಯೆಯಲ್ಲಿ ಬಿಲ್ಲವ ಬಾಂಧವರು ಸಮಾವೇಷದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ಸಮಿತಿ ಗೌರವಾಧ್ಯಕ್ಷರಾದ ಎ.ರುಕ್ಮಯ ಪೂಜಾರಿ,ಕೆ.ಸಂಜೀವ ಪೂಜಾರಿ ಬೊಳ್ಳಾಯಿ, ಕೆ.ಮಾಯಿಲಪ್ಪ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಜಗದೀಶ ಕೊಯಿಲ, ಕೋಶಾಧಿಕಾರಿ ಪ್ರೇಮನಾಥ್ ಕೆ , ಸಮಿತಿ ಉಪಾಧ್ಯಕ್ಷೆ ಜಯಂತಿ ವಿ.ಪೂಜಾರಿ, ಸಮಿತಿ ಪ್ರಮುಖರಾದ ಲೋಕೇಶ್ ಸುವರ್ಣ ಅಲೆತ್ತೂರು, ಮೋನಪ್ಪ ದೇವಸ್ಯ, ಪುರುಷ ಸಾಲ್ಯಾನ್ ನೆತ್ತರಕೆರೆ, ಸುಂದರ ಪೂಜಾರಿ ಬೋಳಂಗಡಿ, ಶೈಲಜಾ ರಾಜೇಶ್, ಗೋಪಾಲ ಅಂಚನ್, ಸುರೇಶ ಪೂಜಾರಿ ಜೋರಾ ಪತ್ರಿಕಾಗೋಷ್ಠಿಯಲ್ಲಿದ್ದರು.


ಗೋಪಾಲ ಅಂಚನ್*