ಮೂರ್ತೆದಾರರ ಸೇವಾ ಸಹಕಾರಿ ಸಂಘ- ಪಜೀರು ಶಾಖೆ ಉದ್ಘಾಟನೆ

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ನೂತನ ಪಜೀರು ಶಾಖೆಯು ಗುರುವಾರ ಪಜೀರು ಸಚಿನ್ ಪೂವ ಪೂಜಾರಿ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು.
ಮಾಜಿ ಸಚಿವ ಬಿ.ರಮನಾಥ ರೈ ನೂತನ ಶಾಖೆಯನ್ನು ಉದ್ಘಾಟಿಸಿದರು.
ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್ ಠೇವಣಿ ಪತ್ರ ವಿತರಿಸಿದರು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಭದ್ರತಾ ಕೋಶ ಉದ್ಘಾಟಿಸಿದರು.
ಜಿಲ್ಲಾ ಪಂಚಾಯತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಗಟ್ಟಿ, ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯ ನವೀನ್ ಪೂಜಾರಿ, ಬಂಟ್ವಾಳ ಬಂಟ್ವಾಳ ಸಹಕಾರಿ ಸೊಸೈಟಿಯ ಉಪಾಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಕಾರ್ಯನಿರ್ವಾಹಣಾಧಿಕಾರಿ ಬೇಬಿ ಕುಂದರ್, ತಾ.ಪಂ. ಮಾಜಿ ಸದಸ್ಯರಾದ ಉಮ್ಮರ್ ಪಜೀರು, ಸೇಸಪ್ಪ ಪೂಜಾರಿ, ಕಟ್ಟಡದ ಮಾಲೀಕ ವಿಜೇತ್ ಪೂಜಾರಿ, ಗ್ರಾಮ ಪಂಚಾಯತು ಅಧ್ಯಕ್ಷ ಸೀತರಾಮ ಶೆಟ್ಟಿ, ನ್ಯಾಯವಾದಿ ಅಶ್ವನಿ ಕುಮಾರ್ ರೈ ಮೊದಲಾದವರು ಭಾಗವಹಿಸಿ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಬೊಳ್ಳಾಯಿ ಸ್ವಾಗತಿಸಿದರು. ನಿರ್ದೇಶಕ ರಮೇಶ ಅನ್ನಪ್ಪಾಡಿ ವಂದಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು.