ಇರ್ವತ್ತೂರು ಗ್ರಾಮ ಪಂಚಾಯತ್ ಕೃಷಿಕರಿಗಾಗಿ ಮಾಹಿತಿ

ಯುವಧ್ವನಿ ನ್ಯೂಸ್

ಇರ್ವತ್ತೂರು: ಇಲ್ಲಿನ ಗ್ರಾಮ ಪಂಚಾಯತು ವತಿಯಿಂದ
ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ 75 ವಾರಗಳ ಸರಣಿ ಕಾರ್ಯಕ್ರಮದಡಿ ಕೃಷಿ ಇಲಾಖೆಯ ಸಹಯೋಗದಲ್ಲಿ ಕೃಷಿಕರಿಗಾಗಿ ಮಾಹಿತಿ ಕಾರ್ಯಾಗಾರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಎಂ.ಪಿ. ಶೇಖರ್ ಗ್ರಾಮ ಪಂಚಾಯತ್ ಆವರಣದಲ್ಲಿ ಎರೆಹುಳ ಘಟಕಕ್ಕೆ ಚಾಲನೆ ನೀಡಿದರು. ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣ ಉಡುಪ ಕಾರ್ಯಾಗಾರ ಉದ್ಘಾಟಿಸಿ ಬೆಳೆ ವಿಮೆ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯತು ಉಪಾಧ್ಯಕ್ಷೆ ಹರಿಣಾಕ್ಷಿ, ಪಂಚಾಯತ್ ಸದಸ್ಯರಾದ ಪ್ರಶಾಂತ್ ಜೈನ್, ಮಾಲತಿ, ವಿಜಯ, ಪಂಚಾಯತು ಕಾರ್ಯದರ್ಶಿ ನಾರಾಯಣ ನಾಯ್ಕ, ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಸೀತಾರಾಮ ಶೆಟ್ಟಿ, ಬೂಬ ಸಪಲ್ಯ, ಮೂಡುಪಡುಕೋಡಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್ ಕಯ್ಯಾಬೆ ಮೊದಲಾದವರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವುಲಾಲ್ ಚವ್ಹಾಣ್ ನರೇಗಾ ಯೋಜನೆ ಹಾಗೂ ಕೃಷಿ ಅಧಿಕಾರಿ ನಂದನ್ ಶೆಣೈ ಕೃಷಿ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಪಂಚಾಯತು ಸದಸ್ಯ ಸುಧೀಂದ್ರ ಶೆಟ್ಟಿ ಸ್ವಾಗತಿಸಿದರು. ಮಾಜಿ ಸದಸ್ಯ ಜಯಾನಂದ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಮಂಜಪ್ಪ ಮೂಲ್ಯ ವಂದಿಸಿದರು.