ಸಿದ್ದಕಟ್ಟೆ ಪ್ರಥಮ ದರ್ಜೆ ಕಾಲೇಜು- ಕೋವಿಡ್ ಲಸಿಕೆ ಅಭಿಯಾನ

ಸಿದ್ಧಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ದಕಟ್ಟೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ಸ್ ರೇಂಜರ್ಸ್ ಘಟಕ ಹಾಗೂ ಬಂಟ್ವಾಳ ತಾಲೂಕು ಆರೋಗ್ಯ ಇಲಾಖೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ರಾಯಿ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರು ಹಾಗೂ ಹಳೆ ವಿದ್ಯಾರ್ಥಿಗಳಿಗೆ ದ್ವಿತೀಯ ಕೋವಿಡ್ ಲಸಿಕಾ ಅಭಿಯಾನವನ್ನು ನಡೆಸಲಾಯಿತು.


ಲಸಿಕ ಅಭಿಯಾನದಲ್ಲಿ 190 ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಹಾಗೂ 25 ಸ್ಥಳೀಯ ನಾಗರಿಕರು ಲಸಿಕೆಯನ್ನು ಪಡೆದುಕೊಂಡರು. ಒಟ್ಟು 215 ಲಸಿಕೆ ನೀಡಲಾಯಿತು.