ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್-ಮಣ್ಣಿನ ಫಲವತ್ತತೆ ತರಬೇತಿ

ಬಂಟ್ವಾಳ: ಕುಕ್ಕಿಪಾಡಿ ಗ್ರಾಮದ ಕಿರಣ್ ಮಂಜಿಲ ಅವರ
” ನಿಯಾ ಫಾರ್ಮ್” ನಲ್ಲಿ ರೋಟರಿ ಕ್ಲಬ್ ಲೋರೆಟ್ಟೋ ಹಿಲ್ಸ್ ಮತ್ತು ಬಂಟ್ವಾಳ ಕೃಷಿ ಇಲಾಖೆ ಆಶ್ರಯದಲ್ಲಿ ಕೃಷಿಕರಿಗೆ ಮಣ್ಣು ಪರೀಕ್ಷೆ ಮತ್ತು ಮಣ್ಣಿನ ಫಲವತ್ತತೆಯ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು. ತಾಲೂಕು ಕೃಷಿ ಅಧಿಕಾರಿ ನಂದನ್ ಶೆಣೈ ಮತ್ತು ವಿನ್ಯಾಸ ತರಬೇತಿ ನೀಡಿದರು.


ರೋಟರಿ ಕ್ಲಬ್ಬಿನ ಅಧ್ಯಕ್ಷ ರಾಘವೇಂದ್ರ ಭಟ್, ಕಾರ್ಯದರ್ಶಿ ರಮೇಶ್ ನಾಯಕ್, ಪದಾಧಿಕಾರಿಗಳಾದ ಸುರೇಶ್ ಶೆಟ್ಟಿ, ಕಿರಣ್ ಮಂಜಿಲ, ಹರಿಪ್ರಸಾದ್ ಶೆಟ್ಟಿ, ರಿತೇಶ್ ಬಾಳಿಗ ಮೊದಲಾದವರಿದ್ದರು.