ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ-ಅಕ್ಟೋಬರ್ 7 ರಿಂದ ನವರಾತ್ರಿ ಮಹೋತ್ಸವ

ವಾಮದಪದವು: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ಅಕ್ಟೋಬರ್ 7 ರಿಂದ 15 ರವರೆಗೆ ನಡೆಯಲಿದೆ.
ಉತ್ಸವದ ದಿನಗಳಲ್ಲಿ ಪ್ರತಿದಿನ ರಾತ್ರಿ 8.30ಕ್ಕೆ ರಂಗ ಪೂಜೆ, 9.30ಕ್ಕೆ ಅನ್ನಸಂತರ್ಪಣೆ ನಡೆಯಲಿದ್ದು ಅಕ್ಟೋಬರ್ 10ರಂದು ಬೆಳಿಗ್ಗೆ 7.30ಕ್ಕೆ ಚಂಡಿಕಾಯಾಗ, ಅಕ್ಟೋಬರ್ 14ರಂದು ಸಂಜೆ 7.30ಕ್ಕೆ ಆಯುಧ ಪೂಜೆ ನೆರವೇರಲಿದೆ.

ಯಕ್ಷೋತ್ಸವ: ಅಕ್ಟೋಬರ್ 9ರಿಂದ 14 ರವರೆಗೆ ಸಂಜೆ 7 ರಿಂದ ರಾತ್ರಿ 9ರವರೆಗೆ ಯಕ್ಷೋತ್ಸವ ನಡೆಯಲಿದ್ದು ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಯಕ್ಷ ವಿಶ್ವರೂಪ ಎಂಬ ಪೌರಾಣಿಕ ಕಥಾನಕ ಪ್ರದರ್ಶನಗೊಳ್ಳಲಿದೆ.
ಅಕ್ಟೋಬರ್ 15ರಂದು ಬೆಳಿಗ್ಗೆ 10.30 ರಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಪೂಜಾರಿ ಕಲ್ಲುಕೊಡಂಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.